ಮಾಧ್ಯಮಗಳಲ್ಲಿ
ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
Date : 13-07-2022
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ, ರೋಟರಿ ಕ್ಲಬ್, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ 50ಕ್ಕೂ ಹೆಚ್ಚು ಸಂಘ – ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ತಾಲ್ಲೂಕಿನ ಅನೇಕ ನಾಗರಿಕರು, ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಕಾಲೇಜು ವಿದ್ಯಾರ್ಥಿಗಳು , ಸ್ವಯಂ ಸೇವಕರುಗಳು ರಕ್ತದಾನ ಮಾಡಿದ್ದಾರೆ. ಈ ಕಾರ್ಯಕ್ರಮ ಸಮಾಜಕ್ಕೆ ರಕ್ತದಾನದ ಮಹತ್ವ ಸಾರುವ ಮೂಲಕ ಮತ್ತಷ್ಟು ಜನರಿಗೆ ಪ್ರೇರಣೆ ನೀಡಿದೆ.
ರಂಗಭೂಮಿಗೆ ಸಂಬಂದಿಸಿದಂತೆ ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ
Date : 01-07-2022
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಐಕ್ಯೂಎಸಿ, ಭಾಷಾ ಸಂಘ ಹಾಗೂ ಸಿರಿಯಾಳ ಕಲಾಕೇಂದ್ರ ಶಿರಳಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಣದಲ್ಲಿ ರಂಗಭೂಮಿ ಆಧಾರಿತ ಅಂಶಗಳ ಕುರಿತು ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ಪ್ರಾಧ್ಯಾಪಕರು ಹಾಗೂ ಸಿರಿಯಾಳ ಕಲಾಕೇಂದ್ರದ ಕಾರ್ಯದರ್ಶಿಯಾದ ಡಾ. ಗುರುಪ್ರಸಾದ್ ಟಿ.ಆರ್ ಪ್ರಶಿಕ್ಷಣಾರ್ಥಿಗಳಿಗೆ ಬೋಧನೆಯಲ್ಲಿ ರಂಗಭೂಮಿ ಆಧಾರಿತ ಅಂಶಗಳ ಕುರಿತು ಉಪನ್ಯಾಸ ಹಾಗೂ ಅಭ್ಯಾಸಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಕುಮಾರ್ ಜಿ.ಎಸ್ […]
ಅನುಪಯುಕ್ತ ವಸ್ತುವಿನಿಂದ ಕರಕುಶಲ ವಸ್ತು ತಯಾರಿಕೆ : ಕಸದಲ್ಲಿ ರಸ
Date : 27-06-2022
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ಸುಗಂಧ ಸಾಂಸ್ಕೃತಿಕ ವೇದಿಕೆ ಅಡಿಯಲ್ಲಿ “ಕಸದಲ್ಲಿ ರಸ” ಎಂಬ ಶೀರ್ಷಿಕೆಗೆ ಪೂರಕವಾಗಿ ಅನುಪಯುಕ್ತ ವಸ್ತುಗಳಿಂದ ಕರಕುಶಲ ವಸ್ತುಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಶಿಕ್ಷಣಾರ್ಥಿಗಳು ತಮ್ಮ ಮನೆಯಲ್ಲಿನ ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಿ ಉತ್ತಮ ಕರಕುಶಲ ವಸ್ತುಗಳನ್ನು ತಯಾರಿಸಿ ತಮ್ಮ ಸೃಜನಾತ್ಮಕತೆಯನ್ನು ತೋರಿಸಿದರು. ಹಾಗೂ ತಾವು ತಯಾರಿಸಿದ ಕರಕುಶಲ ವಸ್ತುಗಳನ್ನು ಮತ್ತು ಉಪಯುಕ್ತ ವಸ್ತುಗಳನ್ನು ತೀರ್ಪುಗಾರರ ಮುಂದೆ ಸಾದರಪಡಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಯವರು ಹಾಗೂ ಎಲ್ಲಾ ಪ್ರಶಿಕ್ಷಣಾರ್ಥಿಗಳು […]
ಬಾಲ ಕಾರ್ಮಿಕ ವಿರೋಧಿ ದಿನ : ಜನಜಾಗೃತಿ
Date : 15-06-2022
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜುಗಳ ಐಕ್ಯೂಎಸಿ, ಸಮಾಜ ವಿಜ್ಞಾನ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಿಮ್ಮಲಾಪುರ ಮತ್ತು ದೂಪದಹಳ್ಳಿ ಗ್ರಾಮಗಳ ಬೀದಿಗಳಲ್ಲಿ ಪ್ರಶಿಕ್ಷಣಾರ್ಥಿಗಳು ಮತ್ತು ವಿದ್ಯಾರ್ಥಿಗಳು ಬಾಲ ಕಾರ್ಮಿಕ ವಿರೋಧಿ ಘೋಷಣೆಗಳನ್ನು ಕೂಗುತ್ತ ಗ್ರಾಮಸ್ತರಲ್ಲಿ ಜಾಗೃತಿ ಮೂಡಿಸಿದರು. ಅದೇ ಸಂದರ್ಭದಲ್ಲಿ ಸಮಾಜ ವಿಜ್ಞಾನ ಸಂಘದ ಮಾರ್ಗದರ್ಶಕರಾದ ಡಾ. ದೇವರಾಜ ವೈ […]