ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ವಿಜ್ಞಾನ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾಲೇಜಿನ ಕ್ಯಾಂಪಸ್ ನಲ್ಲಿ ಸಸಿಗಳನ್ನು ನೆಡಲಾಯಿತು. ಹಾಗೆಯೇ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಶಿವಮೊಗ್ಗ ಡಿವಿಎಸ್ ಸೀನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ಬಿ ಎಂ ಕುಮಾರಸ್ವಾಮಿಯವರು “ಧರೆ ಹತ್ತಿ ಉರಿದಡೆ” ಎಂಬ ಶೀರ್ಷಿಕೆ ಅಡಿಯಲ್ಲಿ ಪರಿಸರದ ಮಾಲಿನ್ಯ, ಪರಿಸರದ ಕಾಳಜಿಗಳು ಮತ್ತು ಪರಿಸರ ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಕರ್ತವ್ಯಗಳ ಕುರಿತು ಅಂಕಿ ಅಂಶಗಳ ಮೂಲಕ ಮಾಹಿತಿ ನೀಡಿ ಪರಿಸರ ಜಾಗೃತಿಯನ್ನು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪ್ರೊ. ಎಸ್ ಎಸ್ ಗದಗ,ಪ್ರಾಚಾರ್ಯರಾದ ಡಾ. ಶಿವಕುಮಾರ್ ಜಿ ,ಎಸ್ ಸೇರಿದಂತೆ ಬೋಧಕ ಬೋಧಕೇತರ ವರ್ಗದವರು, ಪ್ರಶಿಕ್ಷಣಾರ್ಥಿಗಳು , ಪಿಯು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.