ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ

ಶಿಕಾರಿಪುರ
ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ > ಮಾಧ್ಯಮಗಳಲ್ಲಿ > ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ, ರೋಟರಿ ಕ್ಲಬ್, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ 50ಕ್ಕೂ ಹೆಚ್ಚು ಸಂಘ – ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ತಾಲ್ಲೂಕಿನ ಅನೇಕ ನಾಗರಿಕರು, ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಕಾಲೇಜು ವಿದ್ಯಾರ್ಥಿಗಳು , ಸ್ವಯಂ ಸೇವಕರುಗಳು ರಕ್ತದಾನ ಮಾಡಿದ್ದಾರೆ. ಈ ಕಾರ್ಯಕ್ರಮ ಸಮಾಜಕ್ಕೆ ರಕ್ತದಾನದ ಮಹತ್ವ ಸಾರುವ ಮೂಲಕ ಮತ್ತಷ್ಟು ಜನರಿಗೆ ಪ್ರೇರಣೆ ನೀಡಿದೆ.